Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜತೆ ಮೈತ್ರಿಯ ಅನಿವಾರ್ಯತೆ ಬಿಜೆಪಿಗಿಲ್ಲ, ಲೋಕಸಭೆಯಲ್ಲಿ ಕಳೆದ ಸಲದಷ್ಟೇ ಸೀಟು ಗೆಲ್ಲುತ್ತೇವೆ. ಹೆಚ್‌ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದಿದ್ದಾರೆ.
ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು. ಹೀಗಾಗಿ ಎದ್ದಿದ್ದ ಹಲವು ಅನುಮಾನಗಳಿಗೆ ಈಗ ಸುನೀಲ್ ಕುಮಾರ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
"ಜೆಡಿಎಸ್ ಜತೆ ಮೈತ್ರಿಯ ಅನಿವಾರ್ಯತೆ ಬಿಜೆಪಿಗಿಲ್ಲ, ಲೋಕಸಭೆಯಲ್ಲಿ ಕಳೆದ ಸಲದಷ್ಟೇ ಸೀಟು ಗೆಲ್ಲುತ್ತೇವೆ. ಹೆಚ್‌ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ." @BJP4Karnataka pic.twitter.com/mOrl21eZ2I
— Sunil Kumar Karkala (@karkalasunil) July 27, 2023
S muniswamy: ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ