ನವದೆಹಲಿ: ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಮತ್ತು 2000 ರೂ ದಂಡವನ್ನು ವಿಧಿಸಿದೆ. 2017ರಲ್ಲಿ ನ್ಯಾಯಾಲಯದಿಂದ ಮಾಹಿತಿಯನ್ನು ತಡೆಹಿಡಿದಿದ್ದಕ್ಕಾಗಿ ಅವರು ನ್ಯಾಯಾಂಗ ನಿಂದನೆಯ ಅಪರಾಧಿ ಎಂದು ಕಂಡುಬಂದಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಈ ತೀರ್ಪನ್ನು ಪ್ರಕಟಿಸಿದೆ.
ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸೇರಿದ 9,000 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಸುಸ್ತಿ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೂ ಒಳಗೊಂಡ ನ್ಯಾಯಪೀಠವು ಮಾರ್ಚ್ 10 ರಂದು ಮಲ್ಯ ವಿರುದ್ಧದ ವಿಚಾರಣೆಯು “ಸತ್ತ ಗೋಡೆಗೆ” ಹೊಡೆದಿದೆ ಎಂದು ಪರಿಗಣಿಸಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.




