ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ 2ನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ. ನವೆಂಬರ್ 10, 2024ರವರೆಗೆ ಇವರ ಅಧಿಕಾರಾವಧಿ.
ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ
ನ್ಯಾ. ಚಂದ್ರಚೂಡ್ ಅವರ ವೃತ್ತಿ ಜೀವನ
ಮೇ 12, 2016 ರಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾಗಿ ನೇಮಕಗೊಂಡರು ನಂತರ ಅ.31 2013 ರಿಂದ ಸುಪ್ರೀಂ ಕೋರ್ಟ್ ಗೆ ನೇಮಕವಾಗುವವರೆಗೆ ಅಲಹಾಬಾದ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
- ಮಾರ್ಚ್ 29, 2000 ರಿಂದ ಅಲಹಾಬಾದ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗುವವರೆಗೆ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿದ್ದರು.
- 1998 ರಿಂದ ಬಾಂಬೆ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾವವರೆಗೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕರ್ತವ್ಯ ನಿರ್ವಸಿದ್ದರು.
- ಜೂನ್ 1998ರಲ್ಲಿ ಬಾಂಬೆ ಹೈಕೋರ್ಟ್ ಅವರನ್ನು ಹಿರಿಯ ವಕೀಲರಾಗಿ ನೇಮಿಸಿದರು
ಜಸ್ಟಿಸ್ ಚಂದ್ರಚೂಡ್ ಅವರು ನ್ಯಾಮೂರ್ತಿ ಉದಯ್ ಉಮೆಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿದ್ದಾರೆ. ಲಲಿತ್ ಅವರು ಅ. 11 ರಂದು ಜಸ್ಟಿಸ್ ಡಿ ವೈ ಚಂದರಚೂಡ್ ಅವರ ಹೆಸರು ಕೇಂದ್ರಕ್ಕೆ ಉತ್ತರಾಧಿಕಾರಿಯನ್ನಾಗಿ ಶಿಫಾರಸು ಮಾಡಿದ್ದರು.
ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ