ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ..!

www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ.

ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಜಾರಿಯಾಗಿಲ್ಲ. 6 ವಾರ ಜೀವದಾನ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.  

ಶಿಕ್ಷೆಯನ್ನು ಪರಿವರ್ತಿಸುವಂತೆ ರಾಷ್ಟ್ರಪತಿಗೂ ಉಮೇಶ್‌ ರೆಡ್ಡಿ ಮನವಿ ಸಲ್ಲಿಸಿದ್ದ. ಆದರೆ ಅಲ್ಲಿಯೂ ಉಮೇಶ್‌ ರೆಡ್ಡಿಗೆ ಹಿನ್ನಡೆ ಉಂಟಾಗಿ,  ಉಮೇಶ್‌ ರೆಡ್ಡಿ ಮನವಿಯನ್ನು ರಾಷ್ಟ್ರಪತಿ ತಿರಸ್ಕರಿಸಿದರು.  ಸುಪ್ರೀಂ ಕೋರ್ಟ್‌ ಈ ಅರ್ಜಿಯನ್ನು ಹೈಕೋರ್ಟ್‌ಗೆ ವರ್ಗಾಯಿಸಿತು.

About The Author