ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ಕರೆದು ಮಾತನಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾನೆ.
ಸೂರಜ್ ರೇವಣ್ಣ ಕೇಸ್- ಪರಮೇಶ್ವರ್ ಹೇಳಿದ್ದೇನು?
- Advertisement -
- Advertisement -