Monday, October 27, 2025

Latest Posts

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ನವೆಂಬರ್ 24, 2025ರಂದು 53ನೇ ಮುಖ್ಯ ನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ ಸಿಜೆಐ ಅನ್ನು ಶಿಫಾರಸು ಮಾಡುವಂತೆ ಕೇಳಿದ್ದರು. ಇನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಹರಿಯಾಣದ ಹಿಸಾರ್‌ನಲ್ಲಿ ಜನಿಸಿ, 1984ರಿಂದ ಹಿಸಾರ್ ಮತ್ತು ಚಂಡೀಗಢದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದರು.

ಅವರು ಸಾಂವಿಧಾನಿಕ, ನಾಗರಿಕ ಮತ್ತು ಸೇವಾ ವಿಷಯಗಳಲ್ಲಿ ಪರಿಣತಿ ಹೊಂದಿದ್ದು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಅವರು ಮೇ 24, 2019ರಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದು, 2027 ಫೆಬ್ರವರಿ 9ರಂದು ನಿವೃತ್ತರಾಗಲಿದ್ದಾರೆ ಮತ್ತು 2025 ನವೆಂಬರ್ 12ರಿಂದ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss