Thursday, November 21, 2024

Latest Posts

Suryakumar Yadav: ನಂ.1 ಸ್ಥಾನ ಕಳೆದುಕೊಂಡ ಸೂರ್ಯ ಕುಮಾರ್

- Advertisement -

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟಿ-20 ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಸ್ಫೋಟಕ ಬ್ಯಾಟರ್​ ಸೂರ್ಯಕುಮಾರ್​ ಯಾದವ್ ನಂ.1 ಸ್ಥಾನದಿಂದ ಕೆಳಗಿಳಿದಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಐಸಿಸಿಯ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡ ಸೂರ್ಯ 2ನೇ ಸ್ಥಾನಕ್ಕೆ ಇಳಿದಿದ್ದಾರೆ. 2023ರ ಡಿಸೆಂಬರ್‌ನಿಂದ ಸೂರ್ಯಕುಮಾರ್ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಪ್ರಸಕ್ತ ಸಾಗುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟ್ರಾವಿಸ್ ಹೆಡ್, ನಾಲ್ಕು ಸ್ಥಾನಗಳ ಬಡ್ತಿ ಪಡೆದು ಚುಟುಕು ಕ್ರಿಕೆಟ್ ನ ನಂ.1 ಬ್ಯಾಟರ್ ಆಗಿದ್ದಾರೆ.

ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ 844 ಅಂಕಗಳನ್ನು ಪಡೆದುಕೊಂಡಿದ್ದರೆ, ಸೂರ್ಯಕುಮಾರ್ ಯಾದವ್ 842 ಅಂಕ ಗಳಿಸಿಕೊಂಡಿದ್ದಾರೆ. ಇಂಗ್ಲೆಂಡ್ ನ ಫಿಲ್ ಸಾಲ್ಟ್ 816 ಅಂಕಗಳು, ಪಾಕಿಸ್ತಾನದ ಬಾಬರ್ ಆಜಂ 755 ಅಂಕಗಳು ಮತ್ತು ಮೊಹಮ್ಮದ್ ರಿಜ್ವಾನ್ 746 ಅಂಕಗಳನ್ನು ಗಳಿಸಿ ಕ್ರಮವಾಗಿ 3,4 ಮತ್ತು 5ನೇ ಸ್ಥಾನ ಅಲಂಕರಿಸಿದ್ದಾರೆ. ಸೂರ್ಯಕುಮಾರ್ ಅವರನ್ನು ಹೊರತುಪಡಿಸಿದರೆ , 7ನೇ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್ ಅಗ್ರ10ರ ಪಟ್ಟಿಯಲ್ಲಿರುವ ಭಾರತದ ಏಕೈಕ ಬ್ಯಾಟ್ಸಮನ್ ಎನಿಸಿಕೊಂಡಿದ್ದಾರೆ.

ನೂತನ ಐಸಿಸಿ ಟ್ವೆಂಟಿ-20ಐ ಕ್ರಿಕೆಟ್ ರ್‍ಯಾಂಕಿಂಗ್‌ ಪಟ್ಟಿ:
1. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ): 844
2. ಸೂರ್ಯಕುಮಾರ್ ಯಾದವ್ (ಭಾರತ): 842
3. ಫಿಲ್ ಸಾಲ್ಟ್ (ಇಂಗ್ಲೆಂಡ್): 816
4. ಬಾಬರ್ ಆಜಂ (ಪಾಕಿಸ್ತಾನ): 755
5. ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ): 746
6. ಜೋಸ್ ಬಟ್ಲರ್ (ಇಂಗ್ಲೆಂಡ್): 716
7. ಯಶಸ್ವಿ ಜೈಸ್ವಾಲ್ (ಭಾರತ): 672
8. ಏಡೆನ್ ಮಾರ್ಕರಮ್ (ದ.ಆಫ್ರಿಕಾ): 659
9. ಬ್ರಂಡನ್ ಕಿಂಗ್ (ವೆಸ್ಟ್ ಇಂಡೀಸ್): 656
10. ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್): 655

- Advertisement -

Latest Posts

Don't Miss