Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು ಕಸಿದುಕೊಂಡಿರುವ ಹಿನ್ನೆಲೆಯಲ್ಲಿ ಮೂರು ವಿಷಯಗಳಿಗೆ ಸಂಬಂಧಿಸಿದಂತೆ ಕೋರ್ಟ್ ಗೆ ಹೋಗಿದ್ದೇನೆ ಎಂದರು.
ಗಣಪತಿ ಪ್ರತಿಷ್ಟಾಪನೆಗೆ ನಾವು ಯಾವತ್ತೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಸೂಕ್ತ ಚರ್ಚೆ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲಿ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.
Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ
Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!
Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ