- Advertisement -
ಬೆಂಗಳೂರು: ಕರ್ನಾಟಕದ ನಾನಾ ಮಠಗಳ ಸ್ವಾಮೀಜಿಗಳು ಸಂಸದ ಡಿ ಕೆ ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಇದೆ ಎಂದು ತಿಳಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರನ್ನು ಹೈಕಮಾಂಡ್ ದೆಹಲಿಗೆ ಕರೆದಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷದಿಂದ ಸಿಎಂ ಯಾರಾಗುತ್ತಾರೆಂದು ತಿಳಿಯಲಿದೆ.
ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
- Advertisement -

