ರೋಹಿಣಿ ಸಿಂಧೂರಿಗೆ ಸಂಕಷ್ಟ

www.karnatakatv.net: ರಾಜ್ಯ- ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿಕೊಂಡಿದ್ದ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ‘ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ, ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ. ಅಷ್ಟೇ ಅಲ್ಲದೇ, ಆಡಳಿತಾತ್ಮಕ ಮಂಜೂರಾತಿಯನ್ನೂ ಸಹ ಪಡೆದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದ ರೋಹಿಣಿಗೆ ತೀವ್ರ ಹಿನ್ನಡೆಯಾಗಿದೆ.

About The Author