ಟಿ-20 ವಿಶ್ವಕಪ್ ಕ್ರಿಕೆಟ್ ಯುಎಇಗೆ ಸ್ಥಳಾಂತರ

www.karnatakatv.net: ಕ್ರೀಡೆ: ಮುಂಬೈ- ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ವಿದೇಶದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾಹಿತಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಜೊತೆ ಮಾಹಿತಿ ಹಂಚಿಕೊಳ್ಳಲಾಗುವುದು ಎಂದಿರುವ ಜೈ ಶಾ, ಕೊನೆಗೂ ಟಿ-20 ವಿಶ್ವಕಪ್ ಟೂರ್ನಿ ವಿದೇಶದಲ್ಲಿ ಆಯೋಜನೆ ಮಾಡುವ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾ ವೈರಸ್ ಹಾವಳಿ ಕಾರಣ ಅರ್ಧಕ್ಕೆ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಈಗಾಗಲೇ ಯುಎಇನಲ್ಲಿ ನಡೆಸಲು ಕ್ರಮ ಕೈಗೊಳ್ಳವಾಗಿದ್ದು, ಇದರ ಬೆನ್ನಲ್ಲೇ ಟಿ-20 ವಿಶ್ವಕಪ್ ಕೂಡ ಅಲ್ಲೇ ನಡೆಯಲಿದೆ. ಲಭ್ಯವಾಗಲಿರುವ ಮಾಹಿತಿ ಪ್ರಕಾರ ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗುತ್ತಿದ್ದು, ಫೈನಲ್ ಪಂದ್ಯ ಅಕ್ಟೋಬರ್ 15ರಂದು ನಡೆಯಲಿದೆ. ಇದಾದ ಬಳಿಕ ಅಕ್ಟೋಬರ್ 17ರಿಂದ ಆರಂಭಗೊಳ್ಳಲಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 14ರಂದು ನಡೆಯಲಿದೆ ಎನ್ನಲಾಗಿದೆ.

About The Author