ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...