ದೆಹಲಿ: ರಬ್ಬರ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಈಶಾನ್ಯ ದೆಹಲಿಯ ಝಿಲ್ ಮಿಲ್ ಕೈಗಾರಿಕಾ ಪ್ರದೇಶದಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ರಬ್ಬರ್ ಕಾರ್ಖಾನೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಫ್ಯಾಕ್ಟರಿ ಆವರಿಸಿದೆ. ...