ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ....