ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...