ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ.
ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...