ಸುಮಾರು ಹದಿನಾರರ ಶತಮಾನದಲ್ಲಿ ಗೋಧಿಗಿಂತಲೂ ಬಾರ್ಲಿಯೇ ಪ್ರಮುಖ ಆಹಾರವಾಗಿತ್ತು. ಅಂದಿನವರ ಆರೋಗ್ಯವನ್ನು ಇಂದಿನವರಿಗೆ ಹೋಲಿಸಿದರೆ ಅವರ ಆರೋಗ್ಯ ಎಷ್ಟೋ ಉತ್ತಮವಾಗಿತ್ತು. ಚೀನಾ, ಈಜಿಪ್ಟ್, ಗ್ರೀಸ್ ಮತ್ತು ರೋಮನ್ನರು ಅಂದಿನ ತಮ್ಮ ಆಹಾರದಲ್ಲಿ ಬಾರ್ಲಿಯ ಸೇವನೆಯನ್ನು ಇತಿಹಾಸದಲ್ಲಿ ದಾಖಲಿಸಿದ್ದಾರೆ. ಈಜಿಪ್ಟ್‌ನ ಇತಿಹಾಸದಲ್ಲಿ ತಿಳಿಸಿರುವ ಪ್ರಕಾರ ನಿತ್ಯವೂ ಬಾರ್ಲಿಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಹಲವು ಐತಿಹಾಸಿಕ...