ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ.
ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು...