ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ ಸ್ಯಾಂಕಿ ಟ್ಯಾಂಕ್ ಈಗ ಅಕ್ಷರಶಃ ಡ್ರೈ ಮೋಡ್‌ಗೆ ಹೋಗ್ತಿದೆ. ಒಂದು ಕಾಲದಲ್ಲಿ ಫುಲ್ ವಾಟರ್, ಗ್ರೀನ್ ವ್ಯೂ ಮತ್ತು ಈವ್ನಿಂಗ್ ವಾಕ್‌ಗಳಿಗೆ ಫೇವರಿಟ್ ಸ್ಪಾಟ್ ಆಗಿದ್ದ ಈ...
ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್ ಸ್ಟ್ಯಾಂಡ್ ಬಳಿ ಆಯೋಜಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದೆಲ್ಲೆಡೆ 8 ವಿಭಿನ್ನ ಸ್ಥಳಗಳಲ್ಲಿ ಮೇಳದಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಕಬ್ಬನ್ ಪಾರ್ಕ್ ಜೊತೆಗೆ ಉತ್ತರ ಬೆಂಗಳೂರಿನ ಸಹಕಾರ...
ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತೆ ಮತ್ತು ಸಿದ್ಧತೆಗಳನ್ನು ಜೋರಾಗಿ ಕೈಗೊಳ್ಳಲಾಗಿದೆ.
ಈ ಸಮಾರಂಭವು ಶ್ರೀ ಶ್ರೀ...
ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...
ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು.
ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...
ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದಿ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರಿಗೆ ಆಕಸ್ಮಿಕವಾಗಿ ಹೆರಿಗೆ ಆಗಿದೆ ಎಂದು ಶಂಕಿಸಲಾಗಿದೆ. ಕಂಪನಿಯ ಬಾತ್‌ರೂಮ್‌ನ ಕಸದ ಬುಟ್ಟಿಯಲ್ಲಿ ಶಿಶುವಿನ ಶವ ಕಂಡು ಬಂದಿದ್ದು, ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.
ಹೆರಿಗೆಯ ನಂತರ, ಗಾಬರಿಗೊಂಡ...
ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಇಬ್ಬರು ಮಕ್ಕಳ ತಾಯಿ ಪ್ರಿಯಾಂಕಾ ಎಂಬ ಮಹಿಳೆ ಕಸದ ಬುಟ್ಟಿ ಹಾಗೂ ಬ್ಯಾಗ್ ಹಿಡಿದು ಮನೆಯಿಂದ ಹೊರಟಿದ್ದಾಳೆ.
ಅದಾದ ಬಳಿಕ ಮನೆಗೆ ವಾಪಸ್...
ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ.
ಈ ಹಿಂದೆ...
ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್‌ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ನಡೆದಿದೆ.
ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...