ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಹೊಸ ವರದಿ ಸ್ಪಷ್ಟಪಡಿಸಿದೆ. 2023ರ NCRB ವರದಿ ಪ್ರಕಾರ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಕಳೆದ ಎರಡು ವರ್ಷಗಳಲ್ಲಿ ಶೇ.40ರಷ್ಟು ಹೆಚ್ಚಾಗಿವೆ ಎಂಬ ಆಘಾತಕಾರಿ ಅಂಕಿ-ಅಂಶ ಹೊರಬಿದ್ದಿದೆ.
ಇದರ ನಡುವೆಯೇ, ಬೆಂಗಳೂರಿನಲ್ಲಿ ಕಳೆದ ತಿಂಗಳ 10ರಂದು ಒಂದೇ...
ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ.
ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಬೆಂಗಳೂರು–ಮುಂಬೈ ನಡುವಿನ ದೀರ್ಘಕಾಲದ ಕನಸು ಶೀಘ್ರದಲ್ಲೇ ನಿಜವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೂಪರ್‌ಫಾಸ್ಟ್ ರೈಲು ಘೋಷಣೆ ಮಾಡಿ, 30 ವರ್ಷಗಳಿಂದ ಜನರ ಬೇಡಿಕೆಗೆ ಕೊನೆಗೂ ಸ್ಪಂದಿಸಿದ್ದಾರೆ. ಈ ಘೋಷಣೆಯೊಂದಿಗೆ ಕರ್ನಾಟಕದ ಜನತೆಗೆ ಸಂಸದ ತೇಜಸ್ವಿ ಸೂರ್ಯ ಗುಡ್ ನ್ಯೂಸ್ ನೀಡಿದ್ದಾರೆ.
ಇದುವರೆಗೂ ಈ ಮಾರ್ಗದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಕ್ಕೆ...
ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ ಹಿಡಿದಿದೆ. ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ನೇತೃತ್ವದಲ್ಲಿ, ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.
ಪ್ರತಿಭಟನಾಕಾರರು ಧರ್ಮಸ್ಥಳದ ನೂರಾರು ಅಸಹಜ ಸಾವುಗಳ ಬಗ್ಗೆ ತನಿಖೆಯಾಗಲಿ. ಗ್ರಾಮಾಭಿವೃದ್ಧಿ ಹೆಸರಿನ ಮೈಕ್ರೋ ಫೈನಾನ್ಸ್...
ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಜನರ ಜೀವನಾಡಿಯಾಗಿರುವ ಬಿಎಂಟಿಸಿ ಬಸ್‌ಗಳು ಇನ್ನು ಮುಂದೆ ಕೇವಲ ನಗರದೊಳಗೆ ಮಾತ್ರವಲ್ಲ, ಹೊರ ಜಿಲ್ಲೆಗಳಿಗೂ ಸಂಚರಿಸಲಿವೆ. ಈ ಮಹತ್ವದ ನಿರ್ಧಾರಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ನಿಗಮಕ್ಕೆ ತಿಳಿಸಲು ಆಹ್ವಾನಿಸಲಾಗಿದೆ.
ಇದುವರೆಗೆ ಬಿಎಂಟಿಸಿ ಬಸ್‌ಗಳು ನಗರದಿಂದ ಗರಿಷ್ಠ 25 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮಾತ್ರ...
ಬೆಂಗಳೂರಿನಲ್ಲಿ ಅರ್ಚಕನ ಮುಖವಾಡದ ಹಿಂದೆ ಕಳ್ಳತನ ನಡೆಸುತ್ತಿದ್ದ ಪ್ರವೀಣ್ ಮತ್ತು ಅವನ ಸಂಗಾತಿ ಸಂತೋಷ್ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಗಲು ದೇವಾಲಯಗಳಲ್ಲಿ ಪೂಜೆ, ಹೋಮ-ಹವನ ಮಾಡುವ ಈ ಅರ್ಚಕ, ರಾತ್ರಿ ಬಂದ ಕೂಡಲೇ ಅದೇ ದೇವಾಲಯದ ಬೆಳ್ಳಿ, ಹಿತ್ತಾಳೆ ಹಾಗೂ ಚಿನ್ನಾಭರಣಗಳನ್ನು ಕದ್ದುಕೊಂಡು ಮಾರಾಟ ಮಾಡುತ್ತಿದ್ದ. ಪ್ರತೀ ಬಾರಿ ಕಳ್ಳತನ ಮಾಡಿದ ನಂತರ...
ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಅಂದರೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಸುಮಾರು 1.75 ಲಕ್ಷ ಶಿಕ್ಷಕರು ಸಮೀಕ್ಷಕರಾಗಿ 2 ಕೋಟಿಗೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ 7 ಕೋಟಿ ಜನರ ದತ್ತಾಂಶ ಸಂಗ್ರಹಿಸಲಿದ್ದಾರೆ. ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ...
ಬೆಂಗಳೂರಿನ ರಸ್ತೆ ಗುಂಡಿ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರ ರಾಜಕೀಯ ಹಾದಿ ಹಿಡಿದು ಟ್ವೀಟ್ ಮೂಲಕ ವಾಗ್ವಾದಗಳು ಜೋರಾಗೆ ನಡೆದಿದ್ದವು. ಇದೀಗ ಅಕ್ಟೋಬರ್ ೩೧ ರ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ ೭೫೦ ಕೋಟಿ ರೂ....
ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...
ಸಿಲಿಕಾನ್ ಸಿಟಿ ರಸ್ತೆಗಳ ಗುಂಡಿಗಳ ಸಮಸ್ಯೆಯಿಂದ ಸಾರ್ವಜನಿಕರು ಸೇರಿದಂತೆ ಐಟಿ ಕಂಪನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕಂಪನಿಗಳು ಬೆಂಗಳೂರು ತೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಮೂಡಿದ್ದವು. ಈ ಪೈಕಿ ಬ್ಲಾಕ್‌ಬಕ್ ಕಂಪನಿಯ ಕುರಿತು ಹರಿದಾಡಿದ ವದಂತಿಗಳಿಗೆ ಇದೀಗ ಕಂಪನಿ CEO ರಾಜೇಶ್ ಯಾಬಾಜಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
2015ರಲ್ಲಿ ಬೆಂಗಳೂರಿನ...
Political News: ಬಸವಣ್ಣನವರ ಐಕ್ಯಸ್ಥಳವಾದ ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಮಹಿಳೆಯರು ಮಾಂಸದೂಟ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಆಕ್ರೋಶ...