Bidar News: ಬೀದರ್: ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಅವರು, ಕುಟುಂಬದವರ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು. ಒಂದೇ ಗ್ರಾಮದ...
ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್ ಎದುರಾಗಿದೆ. ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳನ್ನೇ ನೆಚ್ಚಿಕೊಂಡಿದ್ದ ಬರೋಬ್ಬರಿ 82,000ಕ್ಕೂ ಹೆಚ್ಚು ಜನರ ಪೆನ್ಷನ್ ಅನ್ನು ಅಧಿಕಾರಿಗಳು ಏಕಾಏಕಿ ಸ್ಥಗಿತಗೊಳಿಸಿದ್ದು, ಸಾವಿರಾರು ಅರ್ಹ ಫಲಾನುಭವಿಗಳು ಕಂಗಾಲಾಗಿದ್ದಾರೆ.
ಪರಿಶೀಲನೆ ಹೆಸರಿನಲ್ಲಿ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ 320 ಗ್ರಾಂ ಚಿನ್ನಾಭರಣಗಳು ಹಾಗೂ 690 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಆರೋಪಿಗಳನ್ನು ಬಂಧಿಸಿ, ಒಟ್ಟು...
ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು ಗುರುತಿಸಲಾಗಿದೆ.
ಇವರು ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾ ನಿವಾಸಿಯಾಗಿದ್ದ ಅನಿಷ್ಕಾರ್, ವಸತಿ...
ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ.
ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...
ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು.
ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...