ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು.
ವಿರೋಧ ಪಕ್ಷದ ನಾಯಕ...
ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು
ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...
ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ.
ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿಯ 13 ಮುಖಂಡರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಮುಖಂಡರಾದ ಉಮೇಶ್ ಶೆಟ್ಟಿ, ಶಿವಕುಮಾರ್, ಹರ್ಷ ಹೆಗ್ಡೆ, ವೆಂಕಟ್, ಕರುಣಾಕರ್, ನಾಗೇಶ್, ಪ್ರಶಾಂತ್,...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ...
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ನಗರದ ಒನಕೆ ಓಬವ್ವ ಸರ್ಕಲ್ನಲ್ಲಿ ಸೇರಿದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಬಿಜಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ...
Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನೀತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ. ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ. ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಧಿಕ್ಕಾರ. ಕಾಂಗ್ರೆಸ್ ತೊಲಗಿಸಿ, ಕರ್ನಾಟಕ ಉಳಿಸಿ. ಜನವಿರೋಧಿ ಸರ್ಕಾರಕ್ಕೆ ಧಿಕ್ಕಾರ. ಬಿತ್ತನೆ ಬೀಜ ಬೆಲೆ...
ಕೋಲಾರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದ್ದು ಈಗಾಗಲೆ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯದ ಜನ ತಿರುಗಿ ಬಿದ್ದಿದ್ದಾರೆ. ಈ ಸರ್ಕಾರ ಜನವಿರೋದಿ ಮತ್ತು ರೈತ ವಿರೋದಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಹೊಸ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು...
ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...