ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ.
ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ.
ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ...
ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...
ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
ಬೆಂಗಳೂರು: ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಒತ್ತಾಯ ಹೇರುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಈ 3 ಶಾಸಕರು ಕಾಂಗ್ರೆಸ್ ನಲ್ಲೂ ಇರದೇ ಬಿಜೆಪಿಯಲ್ಲೂ ಸ್ಥಾನ ಸಿಗದೆ ಅತಂತ್ರ ಸ್ಥಿತಿ ತಲುಪಲಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ.
ಮೈತ್ರಿ...
ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ.
ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...
ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...