ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...