‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....
ಪ್ರಮೋದ್ ಕಿರುತೆರೆಯಿಂದ ಹಿರಿತೆರೆಗೆ ಬಂದ ನಟ. ತಮ್ಮ ಮೊದಲ ಸಿನಿಮಾ 'ಗೀತಾ ಬ್ಯಾಂಗಲ್ ಸ್ಟೋರ್' ಸಿನಿಮಾದಲ್ಲಿಯೇ ಗಮನ ಸೆಳೆದಿದ್ದರಾದರೂ, ಹೆಚ್ಚು ಹೆಸರು ಮಾಡಿದ್ದು ಮಾತ್ರ 'ಪ್ರೀಮಿಯರ್ ಪದ್ಮಿನಿ' ಸಿನಿಮಾದ ನಂಜುಂಡಿ ಪಾತ್ರದ ಮೂಲಕ. ನಂತರ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇತ್ತೀಚಿಗಷ್ಟೇ ಓಟಿಟಿಯಲ್ಲಿ ರಿಲೀಸ್ ಆಗಿ ಮನೆ ಮಾತಾದ 'ರತ್ನನ್ ಪ್ರಪಂಚ' ಸಿನಿಮಾದಲ್ಲಿಯೂ ಕೂಡ ಪ್ರಮೋದ್ ನಟಿಸಿದ್ದಾರೆ....