ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...
ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...
ಬಿಡಿಎ ಕಿಕ್‌ಬ್ಯಾಕ್ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್ ಸಂಬಂಧ, ಬಿಎಸ್‌ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ.
ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...
ಧರ್ಮ ಜಾಗೃತಿ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭಾಷಣ ಮಾಡಿ ರಾಜ್ಯ ರಾಜಕೀಯದ ಮೇಲೆ ಕಿಡಿಕಾರಿದ್ದಾರೆ. ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ಕುಟುಂಬವನ್ನು ಪರೋಕ್ಷವಾಗಿ ಗುರಿಯಾಗಿಸಿ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ, ಈಶ್ವರಪ್ಪ, ಬೊಮ್ಮಾಯಿ, ಅರಗ ಜ್ಞಾನೇಂದ್ರ ಸೇರಿದಂತೆ ಅನೇಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ತಂದೆ-ಮಗ ಇಬ್ಬರೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
ಕೊಪ್ಪಳ: ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಕಾಂಗ್ರೆಸ್ ನವರು ಮಾತನಾಡಿದ್ದು, ಬಿಜೆಪಿಯಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಮನೆಯೊಂದು ಮೂರು ಬಾಗಿಲು ಆಗಿದೆ. ಪಕ್ಷದಲ್ಲಿ ಭಿನ್ನಭಿಪ್ರಾಯ, ಗೊಂದಲಗಳಿವೆ ಎಂಬ ಮಾತಿಗೆ ಬಿಎಸ್ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆ ಎಂಬುದು ಭ್ರಮೆ. ಕಾಂಗ್ರೆಸ್ ನವರು...
ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...