ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಚಿಕ್ಕಮಗಳೂರಿನಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಈಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ...