ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು.
ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು,...