ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ.
ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...
ದಲಿತರ ಅಭಿವೃದ್ದಿ ಕಾರ್ಯಗಳಿಗೆ ಮೀಸಲಾಗಿದ್ದ ಎಸ್ ಸಿಪಿ-ಟಿಎಸ್‌ಪಿ ಯೋಜನೆಯ ೧೩ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ವಿಧಾನ ಸಭೆಯಲ್ಲಿ ಪ್ರಶ್ನೋತ್ರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ೨೦೨೫-೧೬ ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ...
ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ...
ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಿದರು.
ವಿಶೇಷವಾಗಿ ಡಿಕೆ ಶಿವಕುಮಾರ್ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ರಾಜಕೀಯ ರೂಪ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಾಯಕರ ಹೇಳಿಕೆಗಳು ತಿರುಗೇಟುಗಳು ಜೋರಾಗುತ್ತಿವೆ. ಬಿಜೆಪಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಯನ್ನು ಸಹ ಮಾಡಲಾಗಿದೆ. ಇದೀಗ ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...
ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ.
ಇಂದು ರಾಜೀನಾಮೆ ನೀಡಿರುವ ಕೆ. ಎನ್ ರಾಜಣ್ಣ...
ಕೆ.ಎನ್ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...
ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.
ರಾಹುಲ್...