ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ.
ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಕದನ ತೀವ್ರ ಸ್ವರೂಪ ಪಡೆದಿದೆ. ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಈಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ರೈತರ ಜೊತೆ ಮಾತುಕತೆ ನಡೆಸಿದರು. ಆದರೆ ಸರ್ಕಾರದ ಯಾವುದೇ ಸಂಧಾನ ಸಾಧ್ಯವಾಗಲಿಲ್ಲ. ಸಚಿವರು...
ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ...
ಸಿಎಂ ಸಿದ್ದರಾಮಯ್ಯ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿ, ಅಂದರೆ ಮಹಾಘಟಬಂಧನ್ ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಹ್ವಾನ ಬಂದರೆ ಬಿಹಾರ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಬಿರುಸಾಗಿದೆ. ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ...
ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...
ನಾಯಕತ್ವ ಬದಲಾವಣೆಯ ಕುರಿತ ಸದ್ದು ಗದ್ದಲದ ನಡುವೆ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ನವದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನವೆಂಬರ್ ಕ್ರಾಂತಿಯ ಸದ್ದುಗಳ ನಡುವೆ ನಡೆದಿರುವ ಈ ಭೇಟಿ ಹಲವು ಊಹಾಪೋಹಗಳಿಗೆ ತಲೆದೋರಿಸಿದೆ.
ಮೂರು ದಿನಗಳ ಕಾಲ ದೆಹಲಿಯಲ್ಲೇ ತಂಗಲಿರುವ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ.
ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...
ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರ 10...
ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ ಸಿಎಂ ನಾನೇ ಎಂದು ಖಚಿತವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಇತ್ತ ಉಪ ಮುಖ್ಯಮಂತ್ರಿ...
ಸಿಎಂ ಹೇಳಿದರೆ ಮಾತು ಮುಗಿದಂತೇ, ಅವರ ಮಾತೇ ಅಂತಿಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಒಪ್ಪಿದರೆ ನಾನು ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ಮಾತನಾಡಿದರು.
ಸಿಎಂ ಏನು ಹೇಳುತ್ತಾರೋ ಅದನ್ನೇ ನಾವು...