ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ.
ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...
ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...
ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...
ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ, ಜೆಡಿಎಸ್ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ.
ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...
ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...