ರಾಜ್ಯದ ವಿವಿಧ ಇಲಾಖೆಗಳ 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುನ್ನಡೆಸುತ್ತಿದೆ. ಈ ಹುದ್ದೆಗಳ ಮುಖ್ಯ ಪರೀಕ್ಷೆಯ ಮೌಲ್ಯಮಾಪನ ಭರದಿಂದ ಪೂರ್ಣಗೊಂಡಿದ್ದು, ಜನವರಿಯಲ್ಲಿ ಸಂದರ್ಶನ ನಡೆಯುವ ಸಾಧ್ಯತೆ ಇದೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.
ಈ ಬಾರಿಯ ಮೌಲ್ಯಮಾಪನದಲ್ಲಿ UPSC ಮಾದರಿಯನ್ನು ಅಳವಡಿಸಲಾಗಿದೆ. ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆಯನ್ನು ಹೆಚ್ಚಿಸಲು ತಂತ್ರಜ್ಞಾನ ಸೇರಿದಂತೆ...