ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು.
ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...