ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ.
ಶ್ರೀನಿವಾಸಪುರ ಪ್ರವಾಸಿ...
ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್ ವಿರುದ್ಧ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ.
ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...
ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...
ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಬಂಧಿಸಲಾಗಿದೆ.
ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್ ಕೇರ್ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ.
ಆದರೆ...
ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು.
ಅಲ್ಲದೆ, ತೇಜಸ್ವಿ ಸೂರ್ಯ ಅವರು...
ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲಾ...
ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...