ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳ ಪೈಕಿ, 5 ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆಗಳು, ಅಧ್ಯಯನ ವರದಿಗಳು ನಡೆದಿವೆ. ಇದೀಗ ಮತ್ತೆ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳು ಹಾಗೂ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನವೆಂಬರ್ 5ರಂದು ಈ ನಿಟ್ಟಿನಲ್ಲಿ ನಡೆಯಲಿರುವ ಅವಲೋಕನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಪ್ರತಿಷ್ಠಿತ...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರ, ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಜಗದೀಶ್ ಗುಡಗುಂಟಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ...
ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಗುಲಿದೆ. ಆರ್‌ಎಸ್‌ಎಸ್ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಮಂಗಳವಾರ ಸರ್ಕಾರದ ಆದೇಶದ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರವು 10 ಜನಕ್ಕಿಂತ ಹೆಚ್ಚು ಮಂದಿ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...
ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...
ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...
ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆದಾರರ...
ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...
ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...
ಕಾಂಗ್ರೆಸ್ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್‌ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....