ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ.
ಕುರುಬ...
ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ.
ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...
ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಭೇಟಿ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ನಗರಕ್ಕೆ ದೌಡಾಯಿಸಿದ್ದು, ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ರು. ಚಿಕಿತ್ಸಾ ವೆಚ್ಚವನ್ನ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಅಂತಾ ಭರವಸೆ ನೀಡಿದ್ದಾರೆ.
ಇನ್ನು, ಶಾಂತಿಗ್ರಾಮದ ಸರ್ಕಾರಿ ಶಾಲೆಯಲ್ಲಿ, ಸಂಸದ ಶ್ರೇಯಸ್ ಪಟೇಲ್,...
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...
ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...
ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಗುರಿಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ರಥಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಖುದ್ದು ಪರಮೇಶ್ವರ್ ಅವರೇ ನಾನು ಶುದ್ಧವಾದ ಕಾಂಗ್ರೆಸಿಗನಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಸೇಫಾ? ಅಥವಾ ಬದಲಾವಣೆ ಆಗುತ್ತದೆಯೇ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಜ್ಯೋತಿಷಿಗಳಿಂದ ಹಿಡಿದು ಪ್ರತಿಪಕ್ಷಗಳವರೆಗೆ ಎಲ್ಲರೂ ಈ ಬಗ್ಗೆ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯ ಸ್ವತಃ ನಾನು 5 ವರ್ಷಗಳ ಕಾಲ ಸಿಎಂ ಆಗಿ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೂ ಚರ್ಚೆಗೆ ವಿರಾಮ ಬಿದ್ದಿಲ್ಲ. ಹಾಗಾದರೆ...
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಉತ್ತಮ ಆಡಳಿತದ ಜೊತೆಗೆ ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಿನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಿದರು. ಜನಸೇವೆಯ ಸುಧಾರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು...
ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತಕ್ಕೆ ತಲುಪಿದ ಹಿನ್ನೆಲೆಯಲ್ಲಿ, ಹೊಸ ಸಭಾಪತಿ ಸ್ಥಾನಕ್ಕಾಗಿ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅಥವಾ ಹಾಲಿ ಸಭಾನಾಯಕ ಎನ್.ಎಸ್. ಬೋಸರಾಜು ಅವರ ಹೆಸರುಗಳು ಮುಂಚಿತವಾಗಿ ಕೇಳಿಬರುತ್ತಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಳಿಕ ಸಭಾಪತಿ ಸ್ಥಾನಕ್ಕೆ ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು...