ಕೆ.ಎನ್ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...
ಕೆ.ಎನ್. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ.
ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...
ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.
ರಾಹುಲ್...
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಈ ಕುರಿತು ಆಗಸ್ಟ್ 12ರಂದು ಮಹತ್ವದ ಸಭೆ ಕರೆಯಲಾಗಿದೆ.
ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್ ಅಧ್ಯಕ್ಷತೆಯಲ್ಲಿ, ಸಭೆ ನಡೆಯಲಿದೆ. ಆಗಸ್ಟ್ 12ರ ಸಂಜೆ ವಿಧಾನಸೌಧದಲ್ಲಿ...
ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಭಾಷಣ...
ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...
ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು.
ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...
ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ.
ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....
ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್ ನೋಟಿಸ್ ನೀಡಿದೆ.
ಆಗಸ್ಟ್ 4ರಂದು ವಕೀಲ ಅಮೃತೇಶ್ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...
ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ.
ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...