ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಉಭಯ ನಾಯಕರ ನಿಲುವಿನ ಹಿಂದೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್ 26ರೊಳಗೆ ಅಂತಿಮ ತೀರ್ಮಾನ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ.
ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...
ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ ಸಿಎಂ ನಾನೇ ಎಂದು ಖಚಿತವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಇತ್ತ ಉಪ ಮುಖ್ಯಮಂತ್ರಿ...
ಸಿಎಂ ಹೇಳಿದರೆ ಮಾತು ಮುಗಿದಂತೇ, ಅವರ ಮಾತೇ ಅಂತಿಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಒಪ್ಪಿದರೆ ನಾನು ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ಮಾತನಾಡಿದರು.
ಸಿಎಂ ಏನು ಹೇಳುತ್ತಾರೋ ಅದನ್ನೇ ನಾವು...
ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...
ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ.
ಬೆಂಗಳೂರು: ನಾಯಕತ್ವ ಬದಲಾವಣೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....