ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ಬೆದರಿಕೆ ಹಾಕುವ ಅತೃಪ್ತ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾರೇ ರಾಜೀನಾಮೆ ನೀಡಿದರೂ ಕೇವಲ 2 ನಿಮಿಷದಲ್ಲಿ ಅಂಗೀಕರಿಸಲಾಗುವುದು ಎಂದು...
ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರು ಕೂಡ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ.
24 MLCಗಳ ಪ್ರತಿನಿಧಿ ಮಂಡಳಿ, ಮಲ್ಲಿಕಾರ್ಜುನ ಖರ್ಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ, ಸಚಿವ...
ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ.
ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...
ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ, ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮನವಿ ಮಾಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲಾಗುತ್ತದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲಾಗುತ್ತದೆಯೇ ಎಂಬುದನ್ನು ಹೈಕಮಾಂಡ್ ಖಡಾ...
ರಾಜ್ಯ ಕಾಂಗ್ರೆಸ್ ರಾಜಕಾರಣ ಹೊಸ ವರ್ಷಾರಂಭಕ್ಕೆ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವದ ವಿಚಾರಗಳಲ್ಲಿ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಲಿದೆ ಎಂಬ ಸೂಚನೆಗಳು ಕೇಳಿ ಬರುತ್ತಿವೆ. ಶನಿವಾರ ಹೊಸ ದೆಹಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಎಐಸಿಸಿ ಕಾರ್ಯಸೂಚಿ ಅನುಸಾರ ನಡೆದ ಈ ಸಭೆಯ ನೇಪಥ್ಯದಲ್ಲಿ, ಕರ್ನಾಟಕದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ, ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ಅಭಿಯಾನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯ ರಾಜಕಾರಣ ಅಥವಾ ನಾಯಕತ್ವದ ಕುರಿತಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಆದರೆ, ದಿಲ್ಲಿಯಲ್ಲೇ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
ಲೋಕಸಭೆಯ ಪ್ರತಿಪಕ್ಷ ನಾಯಕ...
ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ.
ಸರ್ಕಾರ ಮತ್ತು...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...