ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ
ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ...
ಬೆಳಗಾವಿ: ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರಕ್ಕೆ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ್ರೆ ಸ್ವಾಗತಿಸುತ್ತೇನೆ. ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ, ಜನರ ಆಶೋತ್ತರಗಳೇನು...
ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವರದಿಗಳ ಪ್ರಕಾರ ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು...
ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
ರಾಜ್ಯ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ ಮಾಡಿದ್ದೇವೆ. ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಎರಡೂವರೆ ಗಂಟೆಗಳ ಕಾಲ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಆದ್ಯತೆ ಮೇರೆಗೆ ಯಾವೆಲ್ಲಾ ಕ್ರಮ...
ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು ಜನಸಾಗರವೇ ಹರಿದು ಬಂದಿತ್ತು.
ಮೊದಲ ಬಾರಿಗೆ ಹಾಸನಕ್ಕೆ ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ ಗ್ಯಾರೆಂಟಿ ಬಗ್ಗೆ...
ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು.
ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...
ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.
ತಮ್ಮ...
ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...