ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ "ಗಬ್ರು ಸತ್ಯ"ನ...