ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...