ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಅನುಭವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಾಗಿರುವ...