ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...
ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...
ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್ ಕೇಸ್...
ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಸುಪ್ರೀಂಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...
ಸದನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಇಮೇಜ್ ಕಮ್ಮಿಯಾಗಿದೇ ಎಂದೇ ಹೇಳಲಾಗ್ತಿತ್ತು. ಕಾಂಗ್ರೆಸ್ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಕೆಶಿ, ಇತ್ತೀಚೆಗೆ ಸಾಫ್ಟ್ ಕಾರ್ನರ್ ಆಗಿದ್ದಾರೆ. ಆಗಸ್ಟ್ 31ರಂದು ಉಡುಪಿಯ ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಈ ವೇಳೆ ಭಗವದ್ಗೀತೆಯ ಶ್ಲೋಕ ಹಾಡಿದ್ದಾರೆ. ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.
ಇದೇ ವೇಳೆ...
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ.
ಕಳೆದ ಆಗಸ್ಟ್ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು.
2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್. ರಾಜಣ್ಣ...
ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ.
ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್ ಗೀತೆಯನ್ನು ಡಿಕೆಶಿ...
ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಇವತ್ತು...