ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್ ಅಹಮದ್ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್ ಠಾಣೆ ಪೊಲೀಸರು, ಇಮ್ತಿಯಾಜ್ ಪತ್ನಿ,...