Dharwad News: ಧಾರವಾಡ ಜಿಲ್ಲೆಯ ಹಲವೆಡೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.
ಧಾರವಾಡ ಜಿಲ್ಲೆಯಲ್ಲಿ ಶೇಕಡಾ 96ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದ ಅವರು, ಸುಮಾರು 42 ಸಾವಿರ...
Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....
ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...
Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ ಮೂಲ ಕರ್ತವ್ಯಕ್ಕೆ ಚೆಕ್ಕರ್ ಹೊಡೆಯುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಅಗತ್ಯ ದಾಖಲೆಗಳು ಲಭ್ಯವಾಗದೆ, ಜನ ಸಂಕಷ್ಟ ಎದುರಿಸುತ್ತಿದ್ದಾರೆ.. ಪಾಲಿಕೆ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಹಾನಗರ ಪಾಲಿಕೆಯ ಸಿಬ್ಬಂದಿ...
Haveri News: ಹಾನಗಲ್: ಪಟ್ಟಣ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಗ್ರಾಮ ದೇವಿಯ ದೇವಸ್ಥಾನದ ಲೋಕಾರ್ಪಣೆಯ ಪೋಸ್ಟರ್ ಬಿಡುಗಡೆ ಮಾಡಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿರುವ ದೇವಸ್ಥಾನ ಸಮಿತಿಯ ಖಜಾಂಚಿಯಾದ ರಾಜು ಗೌಳಿ ಅವರು,ಗ್ರಾಮದೇವಿ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಸರಾಂತ ಮಠಾಧೀಶರು ಗಣ್ಯರು ವಿವಿಧ ಪ್ರಮುಖರು ಆಗಮಸಲಿದ್ದಾರೆ...
Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...
Dharwad News: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಪ್ರಕರಣದ ಆರೋಪಿ ಪತ್ನಿ ಪ್ರಿಯಾಂಕಾ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿರವಾದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಹಲ್ಲೆಗೆ ಒಳಗಾಗಿದ್ದ ಮಗುವಿನ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ...
Dharwad News: ವಿದ್ಯಾಕಾಶಿ ಧಾರವಾಡ… ಶಾಂತಿಯ ನಗರವೆಂದೇ ಗುರುತಿಸಿಕೊಂಡಿರುವ ಈ ನಗರದಲ್ಲಿ ನಡೆದ ಭೀಕರ ಘಟನೆ ಇಡೀ ಜನತೆಯನ್ನು ಬೆಚ್ಚಿಬೀಳಿಸಿದೆ. ಜೀವ ಉಳಿಸುತ್ತಿದ್ದ ವೈದ್ಯನೊಬ್ಬ ತನ್ನದೇ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಎಂಟು ವರ್ಷದ ಪುತ್ರ ಆಸ್ಪತ್ರೆಯಲ್ಲಿ ಜೀವನ-ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣದ ಆರೋಪ ಕೇಳಿಬಂದಿರುವುದು ವೈದ್ಯನ ಪತ್ನಿಯ ಮೇಲೆಯೇ.
ಧಾರವಾಡದ ಬಾರಾಕೋಟ್ರಿ...
Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೂನ್ 1ರಿಂದ ಜುಲೈ 10ರವರೆಗೆ ಧಾರವಾಡ ಜಿಲ್ಲೆಯಲ್ಲಿ 173.3 ಮಿಲಿ ಮೀಟರ್ ವಾಡಿಕೆ ಮಳೆಯಾಗಬೇಕಿದ್ದರೆ, ಕೇವಲ 141.1 ಮಿಲಿ...
Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು, ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ಕೃಷಿ ಖಾತೆಗೆ ಇನ್ನೂ ಸಚಿವರ ನೇಮಕವಾಗದಿರುವುದು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳು...