Dharwad News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ರೌಡಿಶೀಟರ್‌ಗಳ ಮೇಲೆ ನಿಗಾ ಇಟ್ಟು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ...
Dharwad: ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆಯಲ್ಲಿ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರಿಗೆ ಪೊಲೀಸ್ ಇಲಾಖೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ.
ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರ...
Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, 20 ವರ್ಷದ ಯುವಕನೊಬ್ಬ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ದೇಶಾದ್ಯಂತ ಆತಂಕ ಸೃಷ್ಟಿಸಿದ್ದ ಡೆಂಗ್ಯೂ ಇದೀಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, ಸೋಂಕಿತ 20 ವರ್ಷದ ಯುವಕನಿಗೆ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ...
Dharwad: ಕಾಮಗಾರಿ ನಡೆಸದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಕಾಮಗಾರಿ ಆರೋಪಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಕಾಮಗಾರಿ...
Hubli News: ಹುಬ್ಬಳ್ಳಿಯಲ್ಲಿ ಮತ್ತೊಂದು ಬಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಕೂಗಳತೆಯಲ್ಲೇ ಭಾರಿ...
Dharwad News: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಅಖಂಡ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ಸಿಗದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ರಾಜ್ಯ ಸಚಿವ ಸಂಪುಟ ರಚನೆಯ ಬಳಿಕ ಅಖಂಡ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನದ...
Dharwad News: ಧಾರವಾಡದಲ್ಲಿ ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕೆಎಂಎಫ್ ಸಮೀಪ ಈ ಘಟನೆ ನಡೆದಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡದ ಕೆಎಂಎಫ್ ಸಮೀಪ ಪೇಯಿಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಮಾಳಾಪುರ ನಿವಾಸಿ ನಬಿಸಾಬ್ ಚಂಕಣ್ಣವರ, 44 ವರ್ಷ, ಮೃತಪಟ್ಟ...
Kundagola News: ಮಳೆಗಾಗಿ ಕಾದು ಕುಳಿತಿರುವ ರೈತರು ಹಾಗೂ ಗ್ರಾಮಸ್ಥರು ವರುಣನ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳು ಸಂಪ್ರದಾಯಬದ್ಧ ಆಚರಣೆಗಳ ಮೂಲಕ ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿದರು.
ಮಳೆಯ ಕೊರತೆಯಿಂದ ಕಂಗಾಲಾಗಿರುವ ರೈತರು ವರುಣ ದೇವರ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ತಮ...
Hubli News: ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಳಿಯ ಅಬ್ಬರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಮರದ ಕೊಂಬೆ ನೆಲಕ್ಕುರುಳಿದ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ಮತ್ತು ಗಾಳಿಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರಿ ಮಳೆಯ ಪರಿಣಾಮ ದಾಜಿಬಾನಪೇಟೆ ಸೇರಿದಂತೆ...
Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು.
ದಾಳಿಯ ವೇಳೆ ಜೂಜಾಟದಲ್ಲಿ...