'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...