ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...
ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...
ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.
ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...
ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ.
ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...
ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್ 26ರೊಳಗೆ ಅಂತಿಮ ತೀರ್ಮಾನ...
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಂತೆ. ಹಿರಿಯ ನಾಯಕರೊಬ್ಬರು ಸಿಎಂ ಆಗ್ತಾರಂತೆ. ಡಿಕೆಶಿ, ಜಾರಕಿಹೊಳಿ ಯಾರಿಗೂ ಸಿಎಂ ಪಟ್ಟ ಸಿಗೋದಿಲ್ವಂತೆ. ಹೀಗಂತ ಬೆಳಗಾವಿಯಲ್ಲಿ ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ಲಾಕ್ ಹಾರ್ಸ್ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನನ್ನ ಜೀವನದಲ್ಲಿ ಒಂದು ದಿನವಾದ್ರೂ ಸಿಎಂ ಅಗಬೇಕೆಂದು ಖರ್ಗೆ ಕುಳಿತಿದ್ದಾರೆ....
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...