ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಿದರು.
ವಿಶೇಷವಾಗಿ ಡಿಕೆ ಶಿವಕುಮಾರ್ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...
ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...
ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...
ಧರ್ಮಸ್ಥಳದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು. ಡಿಕೆಶಿ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗುತ್ತಿದೆ. ಸಿದ್ದು-ಡಿಕೆಶಿ ನಡುವೆ ಆಂತರಿಕ ಬಿಕ್ಕಟ್ಟು, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜೀನಾಮೆ ಪರ್ವ ಇದೀಗ ಬಿಜೆಪಿಗೆ ಬ್ರಹ್ಮಾಸ್ತ್ರವಾಗಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕೆ.ಎನ್ ರಾಜಣ್ಣ ಅವರ ರಾಜೀನಾಮೆ ವಿಷಯದಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆ ಮಾಡಿದ್ದಾರೆ.
ಕೆ.ಎನ್ ರಾಜಣ್ಣ ರಾಜೀನಾಮೆ, ಮತ್ತು ಇದರ ಹಿಂದಿರುವ ರಾಜಕೀಯ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ.
ಇಂದು ರಾಜೀನಾಮೆ ನೀಡಿರುವ ಕೆ. ಎನ್ ರಾಜಣ್ಣ...
ಕೆ.ಎನ್ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...
ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.
ರಾಹುಲ್...
ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಭಾಷಣ...
ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...